
ಕೊಡಗು: ಸೋಮವಾರಪೇಟೆ, ಕುಶಾಲನಗರ, ವಿರಾಜಪೇಟೆ, ಮಡಿಕೇರಿ, ನಾಪೋಕ್ಲು ಭಾಗದಲ್ಲಿ ಗುಡುಗು-ಸಿಡಿಲು ಸಹಿತ ಬಿರುಸಿನ ಮಳೆ ಸುರಿದಿದೆ.

j3tvkannada
ಸೋಮವಾರಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿಯಿತು. ತಂಪೆರೆದ ಮಳೆಯು, ಕಾಳು ಮೆಣಸಿನ ಫಸಲಿಗೆ ಅನುಕೂಲ ತಂದಿದೆ. ಕುಶಾಲನಗರದ ಆನೆಕಾಡು ಭಾಗದಲ್ಲೂ ಜೋರು ಮಳೆಯಾಯಿತು. ಚಾಮರಾಜನಗರ ಜಿಲ್ಲೆ ಮಹದೇಶ್ವರ ಬೆಟ್ಟದಲ್ಲಿ ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಯಿತು.
ಚಾಕವೇಲು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಕನಕಮಾಕಪಲ್ಲಿ ಗ್ರಾಮದಲ್ಲಿ ರೈತರೊಬ್ಬರು ಬೆಳೆದಿದ್ದ ಎರಡು ಎಕರೆ ಹೀರೇಕಾಯಿ ಬೆಳೆ ಮಳೆಯಿಂದಾಗಿ ನೆಲ ಕಚ್ಚಿದೆ.