
ರಾಯಚೂರು: ಕೀರ್ತಿ ಸುರೇಶ್ ತಮಿಳು, ಮಲಯಾಳಂ ಮತ್ತು ತೆಲುಗು ಚಿತ್ರಗಳಲ್ಲಿ ಕಾಣಿಸಿಕೊಳ್ಳುವ ಭಾರತೀಯ ಚಲನಚಿತ್ರ ನಟಿಯಾಗಿದ್ದಾರೆ. ಇತ್ತೀಚೆಗೆ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರು ಮಲಯಾಳಂ ನಿರ್ಮಾಪಕರಾದ ಸುರೇಶ್ ಕುಮಾರ್ ಮತ್ತು ಮಲಯಾಳಂ ನಟಿ ಮೇನಕಾ ಅವರ ಪುತ್ರಿಯಾಗಿದ್ದಾರೆ. ರಾಯಚೂರಿಗೆ ಶಾಪಿಂಗ್ ಮಾಲ್ವೊಂದರ ಉದ್ಘಾಟನೆಗೆ ಆಗಮಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟಿ
ಕರ್ನಾಟಕದಲ್ಲಿ ಪುನೀತ್ ರಾಜಕುಮಾರ್ ನನ್ನ ನೆಚ್ಚಿನ ನಟ. ನಾನು ಈ ಹಿಂದೆ ಡಾ.ರಾಜ್ಕುಮಾರ್ ಅವರನ್ನ ಭೇಟಿ ಮಾಡಿದ್ದೆ, ನನ್ನ ತಾಯಿ ಅವರೊಂದಿಗೆ ನಟಿಸಿದ್ದರುೆಂದು ಬಹುಭಾಷಾ ನಟಿ ಕೀರ್ತಿ ಸುರೇಶ್ ಹೇಳಿದ್ದಾರೆ. ಈ ವೇಳೆ ಮಾತನಾಡಿ ಕನ್ನಡ ಸಿನಿಮಾಗಳಲ್ಲಿ ನಟಿಸುವ ಇಂಗಿತವನ್ನು ವ್ಯಕ್ತಪಡಿಸಿದರು. ಒಳ್ಳೆಯ ಆಫರ್, ಉತ್ತಮ ಸ್ಕ್ರಿಪ್ಟ್ ಬಂದ್ರೆ ಖಂಡಿತ ಕನ್ನಡ ಸಿನಿಮಾದಲ್ಲಿ ನಟಿಸುತ್ತೇನೆ ಎಂದು ಹೇಳಿದ್ದಾರೆ.
ಇನ್ನೂ ಈಗಷ್ಟೇ ವೈವಾಹಿಕ ಜೀವನ ಆರಂಭವಾಗಿದೆ, ತುಂಬಾ ಚೆನ್ನಾಗಿ ಜೀವನ ಸಾಗುತ್ತಿದೆ ಅಂತ ತಿಳಿಸಿದರು. ಸದ್ಯ ತೆಲುಗು ಹಾಗೂ ತಮಿಳು ಸಿನೆಮಾಗಳಲ್ಲಿ ನಟಿಸುತ್ತಿದ್ದು, ಇನ್ನೂ ಕೆಲ ಸಿನೆಮಾಗಳಲ್ಲಿ ನಟಿಸುವ ಬಗ್ಗೆ ಮಾತುಕತೆ ನಡೆದಿದೆ ಅಂತ ಕೀರ್ತಿ ಸುರೇಶ್ ತಿಳಿಸಿದರು.