
ತುಮಕೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು.

j3tvkannada
ನಗರದ 10 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. 4,684 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು.
4,461 ಮಂದಿ ಪರೀಕ್ಷೆ ಬರೆದರೆ, 223 ವಿದ್ಯಾರ್ಥಿಗಳು ಗೈರಾಗಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿತ್ತು.
ಎಲ್ಲ ಕೇಂದ್ರಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ವಿದ್ಯಾರ್ಥಿಗಳು ಮತ್ತು ಪೋಷಕರು ಬೆಳಿಗ್ಗೆಯಿಂದಲೇ ಕೇಂದ್ರಗಳ ಬಳಿ ಸೇರಿದ್ದರು.
ಸಿಬ್ಬಂದಿ ವಿದ್ಯಾರ್ಥಿ ಆಧಾರ್, ಭಾವಚಿತ್ರ ಇತರೆ ದಾಖಲೆ ಪರಿಶೀಲಿಸಿ ಕೇಂದ್ರದ ಒಳಗಡೆ ಬಿಟ್ಟರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.